×
Ad

ಬಾಗಲಕೋಟೆಯಲ್ಲಿ ‘ಕಬ್ಬಿಗೆ ಬೆಂಕಿ’; ತಪ್ಪಿತಸ್ಥರ ವಿರುದ್ಧ ಕ್ರಮ : ಸಿದ್ದರಾಮಯ್ಯ

Update: 2025-11-14 18:12 IST

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಸಮೀಪವಿರುವ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಿಂತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‍ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಪ್ರಥಮ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣಕ್ಕೆ ರೈತರು ಕಾರಣರಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರಾಜ್ಯ ಸರಕಾರ ಪ್ರತಿ ಟನ್ ಕಬ್ಬಿಗೆ 3300 ರೂ. ದರ ನಿಗದಿ ಮಾಡಿದೆ. ಮುಧೋಳ ತಾಲೂಕಿನ ರೈತರು ಅದಕ್ಕೆ ಒಪ್ಪಿಗೆ ನೀಡಿ ತಮ್ಮ ಚಳವಳಿಯನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News