ಬೆಂಗಳೂರು ಮಳೆ ಅವಾಂತರದ ಬಗ್ಗೆ ವಾರ್ ರೂಮ್‍ನಲ್ಲಿ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ
Update: 2025-05-19 20:05 IST
ಬೆಂಗಳೂರು: ಧಾರಕಾರ ಮಳೆಯಿಂದ ನಗರದಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೇಟರ್ ಬೆಂಗಳೂರು ಪ್ರಾಧಿಕಾರದ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಪ್ರಾಧಿಕಾರದ ವಾರ್ ರೂಮ್‍ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು.
ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಸರಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಜರಿದ್ದು ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಿದರು.
ಶಾಸಕ ಎನ್.ಎ. ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್‍ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.