×
Ad

ಎಸೆಸೆಲ್ಸಿ ಪೂರ್ವ ಸಿದ್ದತಾ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

Update: 2024-02-07 18:38 IST

ಬೆಂಗಳೂರು: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆಯನ್ನು ನಡೆಸಲು ಫೆ.26ರಿಂದ ಮಾರ್ಚ್ 2ರ ವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ವೇಳಾಪಟ್ಟಿ ಪ್ರಕಟಿಸಿದೆ.

ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆಗಳು, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಹಾಗೂ ಮಾರ್ಚ್ 1ರಂದು ದ್ವಿತೀಯ ಪಿಯುಸಿ ಪರೀಕ್ಷೆ ಇರುವುದರಿಂದ, ಎಸೆಸೆಲ್ಸಿ ಪರೀಕ್ಷೆಗೆ ಕೆಲವು ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪರೀಕ್ಷಾ ಕೇಂದ್ರಗಳಾಗಿ ರಚಿಸಲಾಗಿರುತ್ತದೆ.

ಈ ಶಾಲಾ/ಕಾಲೇಜುಗಳಲ್ಲಿಯೇ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಬೇಕಾಗಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ತೊಂದರೆ ಉಂಟಾಗುವುದನ್ನು ಪರಿಗಣಿಸಿ ಮಾರ್ಚ್ 1ರಂದು ನಡೆಯುವ ಎಸೆಸೆಲ್ಸಿ ವಿಜ್ಞಾನ ವಿಷಯದ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ 2ಗಂಟೆಯಿಂದ ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News