×
Ad

ಬೆಂಗಳೂರು | ಆಸ್ತಿ ವಿಚಾರ: ಚಾಕುವಿನಿಂದ ಇರಿದು ಸಹೋದರನ ಹತ್ಯೆ

Update: 2025-02-28 20:29 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ಆಸ್ತಿ ವಿಚಾರಕ್ಕೆ ಸಹೋದರನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಾಡಮ್ಮ ಲೇಔಟ್ ನಿವಾಸಿ ಶ್ರೀಕಂಠ(36) ಕೊಲೆಯಾದವರು. ಆರೋಪಿ ತಮ್ಮ ನಾಗೇಂದ್ರ ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಕೈಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಈ ಇಬ್ಬರು ಸಹೋದರರ ಮಧ್ಯೆ ಆಸ್ತಿ ವಿಚಾರಕ್ಕೆ ಜಗಳವಾಗಿ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ನಾಗೇಂದ್ರ ಚಾಕುವಿನಿಂದ ಸಹೋದರ ಶ್ರೀಕಂಠನಿಗೆ ಇರಿದಿದ್ದಾನೆ ಎನ್ನಲಾಗಿದೆ.

ಗಂಭೀರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಬೊಮ್ಮನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News