ಕಾಲ್ತುಳಿತ ಪ್ರಕರಣ | ಅಮಾನತ್ತಿನಿಂದ ತೆರವಾದ ಹುದ್ದೆಗಳಿಗೆ ಅಧಿಕಾರಿಗಳ ನಿಯೋಜನೆ
Update: 2025-06-06 22:55 IST
ಸಾಂದರ್ಭಿಕ ಚಿತ್ರ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ದುರಂತ ಸಂಬಂಧ ಐವರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡ ಹಿನ್ನೆಲೆ ತೆರವಾಗಿದ್ದ ಸ್ಥಾನಗಳಿಗೆ ಅಧಿಕಾರಿಗಳನ್ನು ನೇಮಿಸಿ ಪೊಲೀಸ್ ಇಲಾಖೆ ಆದೇಶಿಸಿದೆ.
ಅಮಾನತುಗೊಂಡಂತಹ ಪೂರ್ವ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಅವರ ಜಾಗಕ್ಕೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಚಂದ್ರಗುಪ್ತ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿದೆ.
ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಟೆಕ್ಕಣ್ಣನವರ ಸ್ಥಳಕ್ಕೆ ಸಿಸಿಬಿ ಡಿಸಿಪಿ ಅಕ್ಷಯ್ ಎಂ.ಹಕಾಯ್ ಅವರನ್ನು, ಕಬ್ಬನ್ ಪಾರ್ಕ್ ಉಪವಿಭಾಗಕ್ಕೆ ಎಸಿಪಿ ರಾಮಚಂದ್ರ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೇವೆಂದ್ರಪ್ಪ ಅವರನ್ನು ವರ್ಗಾವಣೆ ಮಾಡಿ ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.