ಕಾಲ್ತುಳಿತ ಪ್ರಕರಣ | ಎಸಿಪಿ ವಿಕಾಸ್ ಕುಮಾರ್ ಅಮಾನತು ಆದೇಶ ವಜಾ ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ
ಹೈಕೋರ್ಟ್
ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರ್ಘಟನೆಯ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೇಂದ್ರೀಯ ಅಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ತುರ್ತು ವಿಚಾರಣೆ ಕೋರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸರಕಾರದ ಪರ ಎ.ಜಿ.ಶಶಿಕಿರಣ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕ ಸರಕಾರದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿದೆ.
ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಬಳಿಕ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಕೇವಿಯಟ್ ಸಲ್ಲಿಸಿರುವುದಾಗಿ ವಿಕಾಸ್ ಕುಮಾರ್ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ವಿಚಾರಣೆಯನ್ನು ನಾಳೆ(ಜು.3)ಗೆ ನಡೆಸಲಾಗುವುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ತಿಳಿಸಿದೆ.