×
Ad

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ಪಾತ್ರವಿಲ್ಲ: ಯತೀಂದ್ರ ಸಿದ್ದರಾಮಯ್ಯ

Update: 2025-06-06 00:08 IST

ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿದ್ದು, ಗುಪ್ತಚರ ಇಲಾಖೆಯ ವೈಫಲ್ಯ ಘಟನೆಗೆ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗಿಂತ ಹೆಚ್ಚಿನ ಜನರು ಬಂದಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಆಗಿರುವ ಪ್ರಮಾದವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇದಕ್ಕಾಗಿ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ ಮಾಡಿದ್ದೇವೆ. ಇದರಲ್ಲಿ ಸಿಎಂ, ಡಿಸಿಎಂ ಪಾತ್ರವಿಲ್ಲ ಆರ್‌ಸಿಬಿ ಮ್ಯಾನೇಜ್ ಮೆಂಟ್ ಸಂಭ್ರಮಾಚರಣೆ ಮಾಡಲು ಸರಕಾರದ ಮೇಲೆ ಒತ್ತಡ ಹಾಕಿತ್ತು ಎಂದು ತಿಳಿಸಿದರು.

ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗಿಲ್ಲ. ಇಲ್ಲಿಗೆ ಹೆಚ್ಚು ಜನರು ಬರಲೇ ಇಲ್ಲ. ಸಚಿವರು, ಅವರ ಸಂಬಂಧಿಕರು ಹಾಗೂ ಕುಟುಂಬದವರು ಬಂದಿರಬಹುದು.ಅದರಲ್ಲಿ ಯಾವ ಲೋಪವೂ ಉಂಟಾಗಿಲ್ಲ. ಜನರು ಕ್ರಿಕೆಟಿಗರನ್ನು ನೋಡಲು ಸ್ಟೇಡಿಯಂಗೆ ಹೋಗಿದ್ದು, ಅಲ್ಲಿ ಸಮಸ್ಯೆಯಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News