×
Ad

ʼಸಚಿವರ​ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆʼ ಹೇಳಿಕೆ | ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‍ಐಆರ್ ದಾಖಲು

Update: 2024-04-08 19:35 IST

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ ಅವರು ರವಿವಾರ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಎ.8ರ ರವಿವಾರ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ತಬು ರಾವ್ ದೂರು ನೀಡಿದ್ದು, ‘ನನ್ನ ಪತಿ ದಿನೇಶ್ ಗುಂಡೂರಾವ್ ಮತ್ತು ನಮ್ಮ ಕುಟುಂಬದ ಬಗ್ಗೆ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದರು.

ಅದರಂತೆ ದೂರು ಸ್ವೀಕರಿಸಿದ್ದ ಪೊಲೀಸರು, ಯತ್ನಾಳ್ ವಿರುದ್ಧ ಐಪಿಸಿ ಸೆಕ್ಷನ್ 153(ಬಿ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News