×
Ad

ಭೋವಿ ಅಭಿವೃದ್ಧಿ ನಿಗಮ ಹಗರಣ | ತನಿಖಾಧಿಕಾರಿ ಕಿರುಕುಳ ಆರೋಪ : ಯುವತಿ ಆತ್ಮಹತ್ಯೆ

Update: 2024-11-24 12:06 IST

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ತನಿಖಾಧಿಕಾರಿ ಡಿವೈಎಸ್ಪಿ ನೀಡಿರುವ ಕಿರುಕುಳವೇ ಕಾರಣ ಎಂದು ಆರೋಪಿಸಲಾಗುತ್ತಿದೆ.

ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ದಾಖಲೆ ಪೂರೈಸುತ್ತಿದ್ದ 33 ವರ್ಷದ ಜೀವಾ ಎಂಬಾಕೆ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಜೀವಾ ಸಹೋದರಿ ಸಂಗೀತಾ, ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಜೀವಾಗೆ ಸಿಐಡಿ ಡಿವೈಎಸ್ಪಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜೀವಾ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್ ಬರೆದಿದ್ದು, ನವೆಂಬರ್ 14 ರಿಂದ 23ರ ವರೆಗೆ ವೀಡಿಯೊ ಕಾನ್ಸರೆನ್ಸ್ ಮೂಲಕ ತನಿಖೆ ನಡೆಸಲು ನ್ಯಾಯಾಲಯದಿಂದ ಸೂಚಿಸಲಾಗಿತ್ತು. ಆದರೆ 14 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಡಿವೈಎಸ್ಪಿ ಕನಕಲಕ್ಷ್ಮೀ ಸೂಚಿಸಿದ್ದರು.

ವಿಚಾರಣೆಗೆ ಹಾಜರಾಗಿದ್ದ ಜೀವಾ ಅವರ ಒಳ ಉಡುಪುಗಳನ್ನು ವಿವಸ್ತ್ರಗೊಳಿಸಿ, ಸೈನೇಡ್ ತಂದಿದ್ದೀರಾ? ಎಂದು ಪ್ರಶ್ನಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ನೀವೆಲ್ಲಾ ಯಾಕೆ ಬುದುಕಿದ್ದೀರಾ? ನೀನು ಮತ್ತು ನಿನ್ನ ತಂಗಿ ದುಡ್ಡು ಹೇಗೆ ಸಂಪಾದಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಎಲ್ಲ ದಾಖಲಾತಿಗಳನ್ನು ಒದಗಿಸಿದರೂ ಸಹ, ನನಗೆ ಅದು ಬೇಡ, 25 ಲಕ್ಷ ರೂ.ಕೊಡು. ಇಲ್ಲವಾದರೆ ನೀವೆಲ್ಲಾ ಯಾಕೆ ಬದುಕಬೇಕು, ಹೋಗಿ ಸಾಯಿ ಎಂದು ನಿಂದಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಜೀವಾ ಬರೆದಿದ್ದ 13 ಪುಟಗಳ ಡೆತ್‌ನೋಟ್ ಆಧರಿಸಿ ಸಂಗೀತಾ ನೀಡಿರುವ ದೂರಿನ್ವಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News