×
Ad

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್ ನೇಮಕ

Update: 2024-03-30 21:11 IST

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್‍ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.

ರಾಜ್ಯ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಕೊಪ್ಪಳದಲ್ಲಿ ಜಿಲ್ಲಾಧಿಕಾರಿಯಾಗಿ, ಯಾದಗಿರಿ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಜಿಪಂ ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News