×
Ad

ಫೆ.28ಕ್ಕೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ : ಸಚಿವ ಎನ್.ಎಸ್.ಭೋಸರಾಜು

Update: 2025-02-25 21:49 IST

ಎನ್.ಎಸ್.ಭೋಸರಾಜು

ಬೆಂಗಳೂರು : ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಫೆ.28ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮತ್ತು ಸರಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲು ರಾಜ್ಯ ಸರಕಾರದ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಮಂಗಳವಾರ ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್ ನೆಹರು ತಾರಾಲಯದಲ್ಲಿ ಫೆ.28 ರಂದು ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10:30ಕ್ಕೆ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಕಚೇರಿಗಳಲ್ಲಿ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ಧ, ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ಭೋಸರಾಜು ತಿಳಿಸಿದ್ದಾರೆ. 

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News