×
Ad

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಸಚಿವ ಝಮೀರ್ ಅಹ್ಮದ್ ರಾಜೀನಾಮೆ ನೀಡಲಿ : ಟಿ.ಎ.ಶರವಣ

Update: 2025-06-20 17:31 IST

 ಟಿ.ಎ.ಶರವಣ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವ ನೃತ್ಯ ಆಡುತ್ತಿದೆ ಎನ್ನುವುದಕ್ಕೆ  ಶಾಸಕ ಬಿ.ಆರ್.ಪಾಟೀಲ್ ತಮ್ಮದೇ ಸರಕಾರದ ವಿರುದ್ಧ ಮಾಡಿರುವ ಸ್ಫೋಟಕ ಆರೋಪವೇ ಸಾಕ್ಷಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದೆ ಎಂದು ಜೆಡಿಎಸ್ ನಾಯಕ ಟಿ.ಎ.ಶರವಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟನೆ ನೀಡಿರುವ ಅವರು, ವಸತಿ ಇಲಾಖೆಯಲ್ಲಿ ಹೆಜ್ಜೆ ಹೆಜ್ಜೆಗೂ ಕಾಂಚಾಣವೇ ಮಾತಾಡಬೇಕು. ಹಣ ಇಲ್ಲದಿದ್ದರೆ ಅಲ್ಲಿ ಏನೇನೂ ಆಗುವುದಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮಂತ್ರಿ ಝಮೀರ್ ಅಹ್ಮದ್ ರಾಜೀನಾಮೆ ಕೊಟ್ಟು ತೊಲಗಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಝಮೀರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಶರವಣ ಒತ್ತಾಯಿಸಿದ್ದಾರೆ.

ಸಚಿವ ಝಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಝ್‌ ಖಾನ್ ಅವರೇ ಇಲಾಖೆಯಲ್ಲಿನ ಮನೆ ಹಂಚಿಕೆಗೆ ಲಂಚ ಕೊಡುವ ಪರಿಸ್ಥಿತಿ ಇದೆ ಎಂದು ಆಡಳಿತ ಪಕ್ಷದ ಶಾಸಕರಿಗೇ ಹೇಳಿರುವುದು ನೋಡಿದರೆ, ಆಡಳಿತ ವ್ಯವಸ್ಥೆ ಕುಲಗೆಟ್ಟು ಹೋಗಿರುವುದು ಅರ್ಥವಾಗುತ್ತದೆ. ಈ ಸರಕಾರ ಅಧಿಕಾರದಲ್ಲಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಶರವಣ ಕಿಡಿಕಾರಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಬೇಕು. ತನಿಖೆಯ ಮೇಲೆ ಒತ್ತಡ ಹೇರಬಾರದು ಎನ್ನುವ ಕಾರಣಕ್ಕೆ ವಸತಿ ಸಚಿವ ಅಧಿಕಾರದಿಂದ ಕೆಳಗೆ ಇಳಿಯಬೇಕು ಎಂದು ಆಗ್ರಹಪಡಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News