ಪ್ರಜ್ವಲ್ ರೇವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಆದೇಶಕ್ಕೆ ಸದ್ಯ ತಾತ್ಕಾಲಿಕ ತಡೆ ಬಿದ್ದಿದೆ.

ನಿನ್ನೆ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವಂತೆ ಆದೇಶಿಸಿದ್ದರು. ಆದರೆ, ಬೆಳಗಾವಿ ಜೈಲಿನ ಉಸ್ತುವಾರಿ ವಹಿಸಿಕೊಂಡಿದ್ದ ಉತ್ತರ ವಲಯದ ಡಿಐಜಿ ಸೋಮಶೇಖರ್ ಅವರು ಬಂಧನಕ್ಕೊಳಗಾಗಿದ್ದು, ಸದ್ಯ ಅಲ್ಲಿ ಡಿಐಜಿ ಹುದ್ದೆಗೆ ಅಧಿಕಾರಿಯಿಲ್ಲದ ಹಿನ್ನೆಲೆಯಲ್ಲಿ ಸ್ಥಳಾಂತರ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ತಮ್ಮನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಗೆ ಸ್ಥಳಾಂತರಿಸುವ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಲು ಪ್ರಜ್ವಲ್ ರೇವಣ್ಣ ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಸೋಮವಾರ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor