×
Ad

ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಪೋಸ್ಟ್ ಮಾಡಿದ್ದ ಆರೋಪಿ ಸಿಸಿಬಿ ವಶಕ್ಕೆ

Update: 2024-01-21 20:37 IST

ಬೆಂಗಳೂರು: ಮಾರಕಾಸ್ತ್ರ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಪೋಸ್ಟ್ ಮಾಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಶಶಾಂಕ್(26) ಎಂಬುವನನ್ನು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡುತ್ತಿದ್ದ. ಹೀಗಾಗಿ ಶಶಾಂಕ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

2015ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕ್‍ನಗರದಲ್ಲಿ ಒಂದೊಂದು ಕೊಲೆ ಯತ್ನ ಪ್ರಕರಣ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಪಹರಣ ಹಾಗೂ ಕೊಲೆಯತ್ನ ಪ್ರಕರಣ, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಆರೋಪಿ ಶಶಾಂಕ್ ವಿರುದ್ಧ ದಾಖಲಾಗಿರುವುದಾಗಿ ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News