×
Ad

ಬಿಟ್ ಕಾಯಿನ್ ಪ್ರಕರಣ | ಡಿವೈಎಸ್‌ಪಿ ಶ್ರೀಧರ್ ಪೂಜಾರಿಗೆ ನಿರೀಕ್ಷಣಾ ಜಾಮೀನು

Update: 2024-06-27 18:27 IST

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಡಿವೈಎಸ್‌ಪಿ ಶ್ರೀಧರ್ ಪೂಜಾರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ‌.

ನಿರೀಕ್ಷಣಾ ಜಾಮೀನು ಕೋರಿ ಶ್ರೀಧರ್ ಪೂಜಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠವು ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿ ಆದೇಸಿದೆ.

ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಪ್ರಕರಣ ದಾಖಲಿಸಿದ್ದಾರೆ. ಒಂದೇ ಕೇಸ್‌ಗೆ ಎರಡೆರಡು ಬಾರಿ ಎಫ್ಐಆರ್ ದಾಖಲು ಮಾಡಿ ತನಿಖೆ ನಡೆಸಿದ್ದಾರೆ. ಅಲ್ಲದೆ, ಪ್ರಕರಣ ನಡೆದ 4 ವರ್ಷಗಳ ಬಳಿಕ ಬಂಧಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಪೊಲೀಸರ ಕ್ರಮಕ್ಕೆ ನ್ಯಾ.ಎಂ.ಜಿ.ಉಮಾ ಅವರು, ಜನರನ್ನು ಮೂರ್ಖರನ್ನಾಗಿಸಲು ಪೊಲೀಸರು ಯತ್ನಿಸಿದಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News