×
Ad

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ

Update: 2024-07-03 21:38 IST

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News