×
Ad

ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2025-06-19 14:58 IST

ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆಂತಹ ಸಮಸ್ಯೆ ಏನೂ ಇಲ್ಲ ಎಂದರು.

ಈಗಾಗಲೇ ಎಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಸಚಿವೆ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು.

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News