×
Ad

ಈ ಚುನಾವಣೆ ಸಂವಿಧಾನ-ದೇಶದ ರಕ್ಷಣೆಗೆ ಮಹತ್ವದ್ದು : ಸಚಿವ ಝಮೀರ್ ಅಹ್ಮದ್

Update: 2024-04-22 22:01 IST

ಕುಣಿಗಲ್ : ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮತದಾರರಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಕರೆ ನೀಡಿದ್ದಾರೆ.

ಸೋಮವಾರ ಕುಣಿಗಲ್‍ನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಅನುಷ್ಠಾನ ಮಾಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂ., ಯುವಕರಿಗೆ ಒಂದು ಲಕ್ಷ ರೂ. ನೀಡುವ ಭರವಸೆ ನೀಡಲಾಗಿದೆ. ಇದು ಕಾಂಗ್ರೆಸ್ ಸರಕಾರದ ಬದ್ಧತೆ ಹಾಗೂ ಬಡವರ ಪರ ಕಾಳಜಿಗೆ ಸಾಕ್ಷಿ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಡಾ.ರಂಗನಾಥ್, ಪಾಲಿಕೆ ಸದಸ್ಯ ಹಮೀದ್ ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News