ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ: ಸಿಎಂ ಡಿ.ಕೆ. ಶಿವಕುಮಾರ್

Update: 2026-08-19 15:05 IST

ಡಿ.ಕೆ.ಶಿವಕುಮಾರ್

ಬೆಂಗಳೂರು:"ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವ ನಗರ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಫೋಟಿಸಲಾಗಿದ್ದು, ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆಯಿದೆಯೇ ಎಂದು ಕೇಳಿದಾಗ, "ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ" ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News