×
Ad

ನಾಳೆ(ಜೂ.8) ಹೊಸದಿಲ್ಲಿಗೆ ಸಿಎಂ, ಡಿಸಿಎಂ ಭೇಟಿ

Update: 2024-06-07 20:47 IST

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಜೂ.8ರಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕರೆಯಲಾಗಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಸದಿಲ್ಲಿಗೆ ತೆರಳಲಿದ್ದಾರೆ.

ಶನಿವಾರ ಬೆಳಗ್ಗೆ 8 ಗಂಟೆಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಹೊಸದಿಲ್ಲಿಗೆ ತೆರಳಲಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶ, ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನದ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News