×
Ad

ಸಂಚಾರ ನಿಯಮ ಉಲ್ಲಂಘನೆ: 50 ಸಾವಿರ ರೂ.ಗೂ ಅಧಿಕ ದಂಡ ಹೊಂದಿರುವವರ ಮನೆ ಬಾಗಿಲಿಗೆ ಪೊಲೀಸರು!

Update: 2024-02-09 18:44 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ನಿರಂತರವಾಗಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ಸೂಚನೆ ಹೊರಡಿಸಿದ್ದು, ಸಂಚಾರಿ ನಿಯಮ ಉಲ್ಲಂಘಿಸಿ 50 ಸಾವಿರಕ್ಕೂ ಅಧಿಕ ದಂಡ ಹೊಂದಿರುವವರ ಮನೆಗೆ ತೆರಳಿ ಹಣ ಪಾವತಿಸಿಕೊಳ್ಳುವ ಕೆಲಸಕ್ಕೆ ಸಂಚಾರಿ ಪೊಲೀಸರು ಚಾಲನೆ ನೀಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ಅವರು, ಈಗಾಗಲೇ 10 ದಿನಗಳಿಂದ ಸಂಚಾರಿ ಪೊಲೀಸರ ಕಾರ್ಯಾಚರಣೆ ಆರಂಭವಾಗಿದ್ದು, ನಗರದಲ್ಲಿ 2,681 ವಾಹನಗಳ ಮೇಲೆ 50 ಸಾವಿರಕ್ಕೂ ಅಧಿಕ ದಂಡ ಹೊಂದಿರುವುದು ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಅನೇಕ ವಾಹನ ಸವಾರರ ಮನೆಗೆ ಸಂಚಾರಿ ಪೊಲೀಸರು ತೆರಳಿ ದಂಡ ಪಾವತಿಸಿಕೊಳ್ಳಲಾರಂಭಿಸಿದ್ದಾರೆ. ಅನೇಕ ಸಂದರ್ಭಗಳಲ್ಲಿ ವಾಹನಗಳ ಮಾಲಕರು ದಂಡ ಪಾವತಿಸದೇ ಇತರರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಅಂಥವರಿಗೆ ಕಾಲಾವಕಾಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ದಂಡ ಪಾವತಿಸದೇ ಇದ್ದರೆ ಕಾನೂನಾತ್ಮಕವಾಗಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗುತ್ತದೆ ಎಂದು ಎಂ.ಎನ್.ಅನುಚೇತ್ ಹೇಳಿದ್ದಾರೆ.

ಆರು ವರ್ಷಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಹಲ್ಮೆಟ್ ಧರಿಸುವ ಅಗತ್ಯವಿಲ್ಲ. ಆದರೆ, ಶಾಲಾ ಮಕ್ಕಳು ಎಂದು ಎರಡರಿಂದ ಮೂವರನ್ನು ಕೊಂಡೊಯ್ಯುವುದು ಸರಿಯಲ್ಲ. ಸುರಕ್ಷಿತವೂ ಅಲ್ಲ. ಶಾಲಾ ವಾಹನಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಾಗಲೂ ಸಹ ಒಂದೊಂದು ವಾಹನದಲ್ಲಿ ಕ್ಷಮತೆ ಮೀರಿ ಮಕ್ಕಳನ್ನು ಕರೆದುಕೊಂಡು ಹೋಗುವುದು ಪತ್ತೆಯಾಗಿತ್ತು ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News