×
Ad

ಎಂಟು ಮಂದಿ ‘ತಹಶೀಲ್ದಾರ್’ಗಳ ವರ್ಗಾವಣೆ

Update: 2025-12-18 21:17 IST

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಸೇರಿದಂತೆ 8 ಮಂದಿ ತಹಶೀಲ್ದಾರ್‌ ಗಳನ್ನು ವರ್ಗಾವಣೆ ಮಾಡಿ, ರಾಜ್ಯ ಸರಕಾರವು ಗುರುವಾರದಂದು ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಅವರನ್ನು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತಹಶೀಲ್ದಾರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹೂವಿನಹಡಗಲಿ ತಾಲೂಕಿನ ತಹಶೀಲ್ದಾರ್ ಜಿ.ಸಂತೋಷ ಕುಮಾರ್ ಅವರನ್ನು ಹರಿಹರ ತಾಲೂಕಿನ ತಹಶೀಲ್ದಾರ್‌ ರಾಗಿ, ಸ್ಥಳ ನಿರೀಕ್ಷಣೆಯಲ್ಲಿದ್ದ ನಿಂಗಪ್ಪ ಅವರನ್ನು ದೇವರಹಿಪ್ಪರಗಿ ತಾಲೂಕಿನ ತಹಶೀಲ್ದಾರ್ ಹುದ್ದೆಗೆ, ಕೊಪ್ಪಳ ಜಿಲ್ಲೆ ಪುರಸಭೆ ತಹಶೀಲ್ದಾರ್ ರವಿ ಎಸ್.ಅಂಗಡಿ ಅವರನ್ನು ರಾಯಚೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಮಮತ ಎಂ. ಅವರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಪುರಸಭಾ ತಹಶೀಲ್ದಾರ್ ಎಸ್.ವೆಂಕಟೇಶಪ್ಪ ಅವರನ್ನು ಕಿದ್ವಾಯಿ ಮೆಮೋರಿಯಲ್ ಇನ್ಸ್‌ ಟ್ಯೂಟ್ ಆಫ್ ಅಂಕಾಲಾಜಿಯ ಆಡಳಿತಾಧಿಕಾರಿಯಾಗಿ, ನೆಲಮಂಗಲ ತಾಲೂಕು ತಹಶೀಲ್ದಾರ್ ಗ್ರೇಡ್-2 ಕಲಾವತಿ ಎಂ. ಅವರನ್ನು ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‍ನ ತಹಶೀಲ್ದಾರ್‌ ರಾಗಿ, ಕುಣಿಗಲ್ ತಾಲೂಕು ತಹಶೀಲ್ದಾರ್ ಗ್ರೇಡ್-2 ಯೋಗೇಶ್ ಟಿ.ಜಿ. ಅವರನ್ನು ಚನ್ನಪಟ್ಟಣ ತಾಲೂಕಿನ ತಹಶೀಲ್ದಾರ್ ಗ್ರೇಡ್-2 ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News