×
Ad

ವಿಮಾನ ದುರಂತದಲ್ಲಿ ಮೃತಪಟ್ಟ ಅಜಿತ್ ಪವಾರ್ ಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ

Update: 2026-01-28 12:48 IST

ಅಜಿತ್‌ ಪವಾರ್‌ (PTI)

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ವೇಳೆ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟ ಹಿನ್ನೆಲೆಯಲ್ಲಿ, ವಿಧಾನಸಭೆಯ ವಿಶೇಷ ಅಧಿವೇಷನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬುಧವಾರ ವಿಧಾನಸಭೆಯ ಸದನ ಆರಂಭವಾಗುತ್ತಿದ್ದಂತೆಯೇ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೃತರ ಕುರಿತು ಸದನಕ್ಕೆ ಮಾಹಿತಿ ನೀಡಿ, ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಬೆಂಬಲವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಹಾಗೂ ವಿಪಕ್ಷ ನಾಯಕ ಆರ್‌. ಅಶೋಕ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಅಥಣಿ ಶಾಸಕ ಲಕ್ಷ್ಮಣ ಸವದಿ, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್ ಅವರು ಮಾತನಾಡಿದರು.

ನಂತರ ಸದನದಲ್ಲಿ ಒಂದು ನಿಮಿಷ ಮೌನಾಚರಣೆ ನಡೆಸಿ, ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News