×
Ad

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ.ಶರಣಪ್ರಕಾಶ್ ಪಾಟೀಲ್

Update: 2025-12-20 15:59 IST

ಬೆಂಗಳೂರು, ಡಿ.20: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಡುವೆ ಒಪ್ಪಂದ ಎಂಬ ವಿಷಯವನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ಎಲ್ಲಾ ನಾಯಕರ ತೀರ್ಮಾನ ಒಂದೇ. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದರು.

ಸರಕಾರದಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಇಷ್ಟು ಮಾತ್ರ ನಾನೂ ಹೇಳಬಲ್ಲೆ ಎಂದು ಸಚಿವರು ವಿವರಿಸಿದರು.

ಒಪ್ಪಂದದ ಬಗ್ಗೆ ನಮಗೆ ಯಾರಿಗೂ ಗೊತ್ತಿಲ್ಲ. ಅದು ಹೈಕಮಾಂಡ್ ನಾಯಕರಿಗೆ, ಸಿಎಂ ಮತ್ತು ಡಿಸಿಎಂಗೆ ಬಿಟ್ಟ ವಿಚಾರ. ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News