×
Ad

ಏಕರೂಪದ ಪ್ರಯಾಣ ದರ ಜಾರಿಗೊಳಿಸಿದ BMTC

Update: 2023-09-07 10:43 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ. 7: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಏಕರೂಪದ ಪ್ರಯಾಣ ದರವನ್ನು ಜಾರಿಗೊಳಿಸಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ.

ಬೆಳಗ್ಗಿನ ವೇಳೆ ಹಾಗೂ ರಾತ್ರಿ ವೇಳೆಯ ಸಂಚಾರಕ್ಕೆ ಪ್ರತ್ಯೇಕ ಟಿಕೆಟ್‌ ದರವನ್ನು ನಿಗದಿ ಮಾಡಲಾಗಿತ್ತು. ಆದರೆ, ರಾತ್ರಿ ಪ್ರಯಾಣಕ್ಕೆ ಇದ್ದ ಪ್ರಯಾಣ ದರವನ್ನು ಇಳಿಕೆ ಮಾಡಲಾಗಿದ್ದು, ಈಗ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ರಾತ್ರಿ ಸೇವೆಗಳ ಸಾರಿಗೆಗೆ ನಿಗದಿಪಡಿಸಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 6ರ ರಾತ್ರಿಯಿಂದಲೇ ಈ ಆದೇಶ ಜಾರಿಗೆ ಬಂದಿದೆ ಎಂದು ಬಿಎಂಟಿಸಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News