ʼಕರ್ನಾಟಕ ಬಂದ್‌ʼ ಪ್ರತಿಭಟನೆಗೆ ಮುಂದಾಗಿದ್ದ ವಾಟಾಳ್‌ ನಾಗರಾಜ್‌ ಪೊಲೀಸ್ ವಶಕ್ಕೆ

Update: 2026-08-13 11:28 IST

ವಾಟಾಳ್‌ ನಾಗರಾಜ್‌ 

ಬೆಂಗಳೂರು: ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಅವರ ನಿವಾಸದ ಬಳಿ ಸದಾಶಿವನಗರ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಕನ್ನಡ ಒಕ್ಕೂಟವು ಪುರಭವನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು. ಆದರೆ ಮೆರವಣಿಗೆ ಆರಂಭಕ್ಕೂ ಮುನ್ನವೇ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದರಿಂದ ಪ್ರತಿಭಟನಾ ಮೆರವಣಿಗೆ ನಡೆಯುತ್ತದೆಯೇ ಎಂಬುದು ಅನಿಶ್ಚಿತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News