ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್‍ಐಟಿ
ಸಾಂದರ್ಭಿಕ ಚಿತ್ರ
ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ(ಎಸ್‍ಐಟಿ) ಅಧಿಕಾರಿಗಳು ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‍ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಮಾಜಿ ಸದಸ್ಯೆ ಗೀತಾ ಸೇರಿ ನಾಲ್ವರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಅಭ್ಯರ್ಥಿಗಳ ಬಳಿ 40 ಲಕ್ಷ ರೂ.ಗಳಿಂದ 80 ಲಕ್ಷ ರೂ.ವರೆಗೆ ಹಣ ವಸೂಲಿ ಮಾಡಲಾಗಿದೆ. 15 ಅಭ್ಯರ್ಥಿಗಳನ್ನು ಸಂಪರ್ಕಕ್ಕೆ ಪಡೆದು, ಅವರಿಗೆ ಪ್ರಶ್ನೆಪತ್ರಿಕೆಯನ್ನು ಮಾರಾಟ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಜೊತೆಗೆ ತರಬೇತಿಯನ್ನೂ ನೀಡಲಾಗಿದೆ. ಇದಕ್ಕೆ ಶಿವಶಂಕರಪ್ಪ ಸಾಹುಕಾರ್, ಗೀತಾ, ಹಿಂದಿನ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್, ಮಧ್ಯವರ್ತಿ ಬಸವರಾಜ ಕನ್ನಾಳೆ ಹಣವನ್ನು ಪಡೆದಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ ಎಂದು ತಿಳಿದು ಬಂದಿದೆ.