×
Ad

ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಇಬ್ಬರ ಬಂಧನ

Update: 2026-01-04 19:35 IST

ಬೆಂಗಳೂರು : ಸಾಮಾಜಿಕ ಮಾಧ್ಯಮದಲ್ಲಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ.

ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬಂಕ್ ಮ್ಯಾನೇಜರ್ ಆಗಿರುವ ನಾಗರಾಜ್ ತಳವಾರ ಹಾಗೂ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ತಳವಾರ ಬಂಧಿತ ವ್ಯಕ್ತಿಗಳಾಗಿದ್ದಾರೆ.

ಇತ್ತೀಚೆಗೆ ತಮಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್‌ ಬಂದಿದೆ ಎಂದು ಪೊಲೀಸರಿಗೆ ವಿಜಯಲಕ್ಷ್ಮೀ ಅವರು ದೂರು ನೀಡಿದ್ದರು. ದೂರಿನ ಅನ್ವಯ ಪ್ರಕರಣವನ್ನು ದಾಖಲಿಸಿಕೊಂಡ ಪೋಲಿಸರು, ಮೊದಲು ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈಗ ಮತ್ತಿಬ್ಬರನ್ನು ಪೊಲೀಸರು ಬಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News