×
Ad

ಡಿ.ಕೆ.ಶಿವಕುಮಾರ್‌ರಿಂದಲೂ ಅಭಿವೃದ್ಧಿ ಅಸಾಧ್ಯ : ವಿಜಯೇಂದ್ರ

Update: 2026-06-01 21:33 IST

ಬೆಂಗಳೂರು : ‘ಡಿ.ಕೆ.ಶಿವಕುಮಾರ್ ನೇತೃತ್ವದ ಸರಕಾರ ಹೇಗೆ ನಡೆಯಲಿದೆ ಎಂದು ನಾನು ಹೇಳುವ ಅವಶ್ಯಕತೆಯೇ ಇಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಸಾಧ್ಯವಾಗಿಲ್ಲ. ಅನುದಾನದ ಕೊರತೆಯಿಂದ ಡಿ.ಕೆ.ಶಿವಕುಮಾರ್ ಕೂಡ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರಕಾರಕ್ಕೆ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ. ಭ್ರಷ್ಟಾಚಾರ, ಅಲ್ಪಸಂಖ್ಯಾತರ ಓಲೈಕೆ ಬಿಟ್ಟರೆ ಬೇರೇನೂ ಆಗಿಲ್ಲ. ಇವರ ಗ್ಯಾರಂಟಿಗಳಿಂದ ಇವರ ಕೈಯನ್ನು ಕಟ್ಟಿ ಹಾಕಿಕೊಂಡಿದ್ದಾರೆ ಎಂದು ಟೀಕಿಸಿದರು.

ಡಿ.ಕೆ.ಶಿವಕುಮಾರ್ ಮೊದಲು ಪ್ರಮಾಣವಚನ ತೆಗೆದುಕೊಳ್ಳಲಿ. ಬಿಜೆಪಿ ಅವರನ್ನು ಹೇಗೆ ಎದುರಿಸಬೇಕೋ ಎಲ್ಲವನ್ನೂ ಮಾಡುತ್ತೇವೆ. ರಾಜ್ಯಸಭೆ ಚುನಾವಣೆ ಸಂಬಂಧ ಸದ್ಯದ ರಾಜಕೀಯ ಸ್ಥಿತಿಯನ್ನು ನೋಡಿಕೊಂಡು ಕೇಂದ್ರದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೈ ಕಟ್ಟಿ ಕೂರುವುದಿಲ್ಲ: ಪದೇ ಪದೇ ಹಿಂದೂಗಳಿಗೆ ಅವಮಾನ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಸರಕಾರ ಹಿಂಪಡೆದು ಹಿಂದೂಗಳಿಗೆ ಅಪಮಾನ ಮಾಡಿದೆ ಎಂದು ಹೇಳಿದರು.

ಯಾರೋ ಮುಠ್ಠಾಳ: ತಾವು ಡಿ.ಕೆ.ಶಿವಕುಮಾರ್ ‘ವ್ಯವಹಾರ ಪಾಲುದಾರರು’ ಎಂದು ಹೇಳಿದ್ದು ಯಾವ ಮುಠ್ಠಾಳ. ನಾನು ಮತ್ತು ಡಿಕೆಶಿ ಪಾಲುದಾರರು ಎಂಬುದು ಮೂರ್ಖತನದ ಹೇಳಿಕೆ ಎಂದು ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಜಯೇಂದ್ರ, ರಾಜ್ಯಾಧ್ಯಕ್ಷರ ಸ್ಥಾನದ ಬಗ್ಗೆ ಶೀಘ್ರದಲ್ಲೇ ಎಲ್ಲವೂ ಗೊತ್ತಾಗಲಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News