×
Ad

ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ : ಶೇ.80ರಷ್ಟು ಮಂದಿ ಹಾಜರು

Update: 2024-10-27 20:42 IST

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಯ(ವಿಎಒ) ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆದಿದ್ದು, ಶೇ.80ರಷ್ಟು ಮಂದಿ ಹಾಜರಾಗಿದ್ದಾರೆ.

ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆದಿದೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ.80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳನ್ನು ಅತಿ ಸೂಕ್ಷ್ಮ ಎಂದು ಪರಿಗಣಿಸಿದ್ದ ಕಾರಣ ಆ ಜಿಲ್ಲೆಗಳಲ್ಲಿ ಹೆಚ್ಚಿನ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News