×
Ad

ಗ್ರಾಮ ಆಡಳಿತಾಧಿಕಾರಿ ನೇಮಕಾತಿ | ಕನ್ನಡ ಕಡ್ಡಾಯ ಪರೀಕ್ಷೆಗೆ ಶೇ.80ರಷ್ಟು ಮಂದಿ ಹಾಜರು

Update: 2024-09-29 18:59 IST

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ(ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ಅಯೋಜಿಸಿದ್ದ ಕನ್ನಡ ಕಡ್ಡಾಯ ಪರೀಕ್ಷೆ ಸುಗಮವಾಗಿ ನಡೆದಿದ್ದು, ಶೇ.80ರಷ್ಟು ಮಂದಿ ಹಾಜರಾಗಿದ್ದಾರೆ.

ಬೆಂಗಳೂರಿನ 115 ಕೇಂದ್ರ ಸೇರಿದಂತೆ ರಾಜ್ಯದ 1,410 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆದಿದೆ. ಒಟ್ಟು 5.75 ಲಕ್ಷ ಅಭ್ಯರ್ಥಿಗಳ ಪೈಕಿ 4.53 ಲಕ್ಷ ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅ.27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ.

ವಯೋಮಿತಿ ಸಡಿಲಿಕೆಯ ಅನುಕೂಲ ಪಡೆಯುವವರ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ.26ರಂದು ಕನ್ನಡ ಕಡ್ಡಾಯ ಪರೀಕ್ಷೆ ಇರುತ್ತದೆ. ಅದರ ನಂತರ ಅವರೂ ಅ.27ರಂದು ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News