×
Ad

ಯೋಗೀಶ್ ಗೌಡ ಕೊಲೆ ಪ್ರಕರಣ | ವಿನಯ್ ಕುಲಕರ್ಣಿ ವಿರುದ್ಧದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣ ರದ್ದು

Update: 2025-01-30 23:54 IST

ವಿನಯ್ ಕುಲಕರ್ಣಿ

ಧಾರವಾಡ : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಸಾಕ್ಷಿಗಳಿಗೆ ಬೆದರಿಕೆ ಆರೋಪ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿದೆ.

ಪ್ರಕರಣ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅಧಿಕಾರ ವ್ಯಾಪ್ತಿ ಇಲ್ಲದ ಕೋರ್ಟ್ ನಲ್ಲಿ ಬೆದರಿಕೆ ಕೇಸ್ ದಾಖಲಿಸಲಾಗಿದೆ. ಹಾಗಾಗಿ ತಾಂತ್ರಿಕ ಕಾರಣಗಳಿಂದಾಗಿ ಕೇಸ್ ರದ್ದುಪಡಿಸಲಾಗುತ್ತಿದೆ ಎಂದು ಅಭಿಪ್ರಾಯ ಪಟ್ಟು ಹೈಕೋರ್ಟ್‌ ಮೇಲಿನ ಆದೇಶ ನೀಡಿದೆ.

ಕಾನೂನು ಪ್ರಕಾರ ಯೋಗೀಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ನ್ಯಾಯಾಲಯದಲ್ಲೇ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಸಾಕ್ಷಿಗಳಿಗೆ ಬೆದರಿಕೆ ಪ್ರಕರಣ ದಾಖಲಿಸಬೇಕಿತ್ತು. ಆದರೆ ಮತ್ತೊಂದು ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News