ಬೆಂಗಳೂರು : ಜಿಬಿಎ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಜಿಬಿಎ ಚುನಾವಣೆಗಳನ್ನು ಪದೇಪದೇ ಮುಂದೂಡುತ್ತಿರುವ ಕುರಿತು ಬುಧವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ. ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದರು.

ಮತದಾರರ ಸೇರ್ಪಡೆ ಮತ್ತು ಕೈಬಿಡುವಿಕೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಅಂತಿಮ ಮತದಾರರ ಪಟ್ಟಿ ಸಿದ್ಧವಾದ ಬಳಿಕ ಚುನಾವಣೆ ನಡೆಸಲು ಸಾಧ್ಯವಾಗಲಿದೆ. ಇಲ್ಲವಾದಲ್ಲಿ 2011ರ ಜನಗಣತಿಯ ಆಧಾರದ ಮೇಲಾದರೂ ಚುನಾವಣೆ ನಡೆಸಲು ಅನುಮತಿ ನೀಡಬೇಕು. ಸದ್ಯ ಜನಗಣತಿ ಪ್ರಕ್ರಿಯೆ ಆರಂಭವಾಗುತ್ತಿದೆ. ಜನಗಣತಿ ಪೂರ್ಣಗೊಳ್ಳುವವರೆಗೆ ಕಾಯಬೇಕೇ ಅಥವಾ ಬೇರೆ ಯಾವುದಾದರೂ ಮಾನದಂಡದ ಆಧಾರದ ಮೇಲೆ ಚುನಾವಣೆ ನಡೆಸಬೇಕೇ ಎಂಬುದನ್ನು ನಿರ್ಧರಿಸಬೇಕು. ಚುನಾವಣೆ ಮುಂದೂಡಿಕೆಯಾಗುತ್ತಿರುವುದಕ್ಕೆ ಈ ಗೊಂದಲಗಳೇ ಕಾರಣವಾಗಿವೆ ಎಂದು ಡಿಸಿಎಂ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor