ಪಕ್ಷದ ಶಾಸಕರಿಗೆ ಮತದಾನ ತರಬೇತಿ, ಅಣಕು ಮತದಾನ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Update: 2024-02-26 21:52 IST
ಬೆಂಗಳೂರು : ನಮ್ಮ ಪಕ್ಷದ ಎಲ್ಲ ಶಾಸಕರಿಗೆ ನಾಳೆ ನಡೆಯಲಿರುವ ರಾಜ್ಯಸಭೆ ಚುನಾವಣೆ ಮತದಾನದ ಕುರಿತು ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೊಟೇಲ್‍ನಲ್ಲಿಂದು ನಮ್ಮ ಶಾಸಕರು ಅಣಕು ಮತದಾನ ನಡೆಸಿ, ನಾಳೆ ಹೋಟೆಲ್‍ನಿಂದ ನೇರವಾಗಿ ರಾಜ್ಯಸಭಾ ಚುನಾವಣೆ ನಡೆಯಲಿರುವ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ ಎಂದು ವಿವರಣೆ ನೀಡಿದರು.
ನಾಳೆ ನಮ್ಮ ಪಕ್ಷದ ಕಡೆಯಿಂದ ಯಾವುದೇ ಶಾಸಕರು ಯಾವುದೇ ಕಾರಣಕ್ಕೂ ಅಡ್ಡ ಮತದಾನ ಮಾಡುವುದಿಲ್ಲ. ಅಡ್ಡ ಮತದಾನವೂ ನಡೆಯುವುದಿಲ್ಲ. ನಮ್ಮ ಪಕ್ಷದಿಂದ ಸ್ಪರ್ಧಿಸಿರುವ ಮೂವರು ಅಭ್ಯರ್ಥಿಗಳು ನಿಶ್ಚಿತವಾಗಿಯೂ ಗೆಲುವು ಸಾಧಿಸಿದ್ದಾರೆ ಎಂದು ಶಿವಕುಮಾರ್ ಇದೇ ಸಂದರ್ಭದಲ್ಲಿ ¨ಭರವಸೆ ವ್ಯಕ್ತಪಡಿಸಿದರು.