×
Ad

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿ.ಸೋಮಣ್ಣ

Update: 2025-06-02 21:08 IST

ಹೊಸದಿಲ್ಲಿ: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ತುಮಕೂರು ಜಿಲ್ಲೆಯಲ್ಲಿನ ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಭಿವೃದ್ದಿ, ರಾಜ್ಯದಲ್ಲಿನ ಹಲವು ರೈಲ್ವೆ ಮಾರ್ಗಗಳ ಕಾಮಗಾರಿಗಳು ನಡೆಯುತ್ತಿರುವ ಬಗ್ಗೆ ಸೋಮಣ್ಣ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ.

ವಿಶೇಷವಾಗಿ ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ.ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆಯ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಅಮಿತ್‌ ಶಾ ಬಳಿ ವಿನಂತಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News