×
Ad

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ‘ಉಪಚುನಾವಣೆಗೆ ಅಧಿಸೂಚನೆ ಪ್ರಕಟ’

Update: 2024-11-04 21:55 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು : ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ವಿವಿಧ ಕಾರಣಗಳಿಗಾಗಿ ತೆರವಾಗಿರುವ ವಾರ್ಡ್ ಸದಸ್ಯ ಸ್ಥಾನದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದ್ದು, ನ.11ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ನ.12ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.14ಕ್ಕೆ ಉಮೇದುವಾರಿಕೆ ಹಿಂಪಡೆದುಕೊಳ್ಳಲು ಕೊನೆಯ ದಿನ. ನ.23ಕ್ಕೆ ಉಪಚುನಾವಣೆ ಮತದಾನ ನಡೆಯಲಿದ್ದು, ನ.26ಕ್ಕೆ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಆಯೋಗ ತಿಳಿಸಿದೆ.

ಬೆಂಗಳೂರು ನಗರದ ಹೆಬ್ಬಗೋಡಿ ನಗರಸಭೆ ವಾರ್ಡ್ ಸಂಖ್ಯೆ-27, ಆನೇಕಲ್ ಪುರಸಭೆ-22, ಚಂದಾಪುರ ಪುರಸಭೆ-21, ದಕ್ಷಿಣ ಕನ್ನಡ ಬಂಟ್ವಾಳ ಪುರಸಭೆಯ ವಾರ್ಡ್ ಸಂಖ್ಯೆ-2 ಸೇರಿದಂತೆ 17 ಜಿಲ್ಲೆಗಳ 43 ನಗರ ಸ್ಥಳೀಯ ಸಂಸ್ಥೆಗಳ ವಿವಿಧ ವಾರ್ಡ್‍ಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಆಯೋಗ ಮಾಹಿತಿ ನೀಡಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News