×
Ad

ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ : ಆರ್.ಅಶೋಕ್

"ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬ, ಕಾಂಗ್ರೆಸ್‌ ಪಕ್ಷವನ್ನು ನಿಷೇಧ ಮಾಡುವ ದಿನ ಬಹಳ ದೂರವಿಲ್ಲ"

Update: 2025-11-04 11:30 IST

ಆರ್.ಅಶೋಕ್

ಬೆಂಗಳೂರು : ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ. ಸರಿಯಾದ ಯೋಗ್ಯ ರಸ್ತೆ ಇಲ್ಲದ ಕಾರಣ ಈ ಭಾಗದ 38 ಗ್ರಾಮಗಳಿಗೆ ಬಸ್ಸೇ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೇ, ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಎಲ್ಲದರ ಬಗ್ಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ತಮಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ತಮಗೆ ಕಾಣುತ್ತಿಲ್ಲವೇ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ ಎಂದು ಟೀಕಿಸಿದ್ದಾರೆ.

ಆರೆಸ್ಸೆಸ್‌ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ನಿಮ್ಮ ಈ ವೈಫಲ್ಯಗಳನ್ನು ಮರೆಮಾಚಬಹುದು. ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನು ಮತ್ತು ಕಾಂಗ್ರೆಸ್‌ ಪಕ್ಷವನ್ನು ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News