×
Ad

ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

Update: 2024-06-11 00:03 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಇಲ್ಲಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಹಳಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.

ಸೋಮವಾರ ರಾತ್ರಿ 8.56ಕ್ಕೆ ರೈಲು ಬರುವುದನ್ನು ಕಂಡು ಯುವಕ ಹಳಿ ಮೇಲೆ ಹಾರಲು ಯತ್ನಿಸಿ ರೈಲಿನ ಕೋಚ್‌ಗೆ ತಾಗಿ ಪಕ್ಕಕ್ಕೆ ಬಿದ್ದಿದ್ದು, ಬಿಎಂಆರ್‌ಸಿಎಲ್‌ ಸಿಬ್ಬಂದಿ ಕೂಡಲೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವೇಳೆ ಕೆಲಕಾಲ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ವಿದ್ಯುತ್‌ ಸರಬರಾಜು ಕಡಿತಗೊಳಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News