×
Ad

ಮೈಸೂರು ಸ್ಯಾಂಡಲ್ ಸೋಪ್‌ಗೆ ಕನ್ನಡ ಚಿತ್ರರಂಗದವರನ್ನು ರಾಯಭಾರಿ ಮಾಡಬಹುದಿತ್ತು : ಝಮೀರ್ ಅಹ್ಮದ್

Update: 2025-05-25 23:55 IST

ಝಮೀರ್ ಅಹ್ಮದ್‌

ದಾವಣಗೆರೆ : ಕರ್ನಾಟಕದ ಚಿತ್ರರಂಗದಲ್ಲಿ ಬಹಳಷ್ಟು ಪ್ರತಿಭಾವಂತ ನಟಿಯರಿದ್ದರು. ಅವರಲ್ಲಿ ಒಬ್ಬರನ್ನು ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಆಯ್ಕೆ ಮಾಡಬಹುದಿತ್ತು ಎಂದು ವಸತಿ ಸಚಿವ ಝಮೀರ್ ಅಹ್ಮದ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮಾಡಲಾಗಿದೆ. ಈ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು.

ತಮನ್ನಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಆಯ್ಕೆ ಮಾಡಲು ನೀವೇ ಮಧ್ಯಸ್ಥಿಕೆ ವಹಿಸಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಆ ಸಂದರ್ಭದಲ್ಲಿ ವಿಜಯೇಂದ್ರ ಅವರು ಎಲ್ಲೋ ನಮ್ಮ ಜೊತೆಯಲ್ಲಿ ಬಂದಿರಬಹುದು. ಅದಕ್ಕೆ ಹೇಳಿದ್ದಾರೆ ಎಂದು ಉತ್ತರಿಸಿದರು.

ಸಚಿವ ಸಂಪುಟ ಪುನರ್‌ರಚನೆ ಆಗುತ್ತದೆ ಎಂದು ಹೇಳಲಾಗುತ್ತಿದೆ ಎಂಬ ಪ್ರಶ್ನೆಗೆ, ಪಕ್ಷದ ಹೈಕಮಾಂಡ್ ಇದೆ. ಈ ಬಗ್ಗೆ ನಾವೇನು ಹೇಳುವುದಕ್ಕೆ ಆಗುವುದಿಲ್ಲ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಸದ್ಯಕ್ಕೆ ಅಂತಹ ಸಂದರ್ಭ ಬಂದಿಲ್ಲ. ಹೈಕಮಾಂಡ್ ಸಚಿವ ಸಂಪುಟ ಪುನರ್‌ರಚನೆ ಯಾವಾಗ ಬೇಕಾದರೂ ಮಾಡಬಹುದು. ನಮಗೆ ಯಾರಿಗೂ ಅಭ್ಯಂತರವಿಲ್ಲ. ಹೈಕಮಾಂಡ್ ಗೆರೆ ಹಾಕಿದರೆ ನಾವು ಯಾರೂ ಗೆರೆ ದಾಟಲ್ಲ ಎಂದು ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಕೋವಿಡ್‌ 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ರಮ ತೆಗೆದುಕೊಂಡು ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿದೆ. ಕೋವಿಡ್‌ಗೆ ಯಾರೂ ಭಯ ಪಡುವ ಅಗತ್ಯವಿಲ್ಲ. ಆದರೆ, ಪ್ರತಿಯೊಬ್ಬರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಬಾಷ, ಸಿರಾಜ್ ಮುಹಮ್ಮದ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಲೋಕೇಶ್, ವಕ್ಫ್ ಮಂಡಳಿ ಅಧಿಕಾರಿಗಳು ಇದ್ದರು.

ಮದುವೆಗೆ 5 ಲಕ್ಷ ರೂ. ವೈಯಕ್ತಿಕ ಧನಸಹಾಯ :

ಸಹೋದರಿ ಮದುವೆ ಮಾಡಲು ಬೆನ್ನೆಲುಬಾಗಿ ನಿಂತಿದ್ದ ಸಹೋದರ ಮೃತಪಟ್ಟಿದ್ದರಿಂದ ಮದುವೆ ಮಾಡಲು ಕಷ್ಟವಾಗುತ್ತದೆ ಎಂದು ಸಚಿವ ಝಮೀರ್ ಬಳಿ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಂಡರು. ಸ್ಥಳದಲ್ಲೇ ಸಚಿವ ಝಮೀರ್ ಅಹ್ಮದ್‌ ಮದುವೆ ಮಾಡಲು 5 ಲಕ್ಷ ರೂ. ವೈಯಕ್ತಿಕವಾಗಿ ಧನ ಸಹಾಯ ಮಾಡಿ ಶುಭ ಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News