×
Ad

ಬೆಂಗಳೂರು: ಪತ್ನಿಯನ್ನು ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ದೂಡಿ ಹತ್ಯೆಗೈದ ಪತಿ

Update: 2025-02-17 11:34 IST

ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯನ್ನು ನಿರ್ಮಾಣ ಹಂತದ ಕಟ್ಟಡ ಮೇಲಿಂದ ಕೆಳಕ್ಕೆ ದೂಡಿ ಹಾಕಿ ಹತ್ಯೆಗೈದಿರುವ ಘಟನೆ ಸರ್ಜಾಪುರದ ತಿಗಳ ಚೌಡದೇನಹಳ್ಳಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಜುಳಾ(40) ಕೊಲೆಯಾದ ಮಹಿಳೆ. ಮಂಜುನಾಥ್(45) ಆರೋಪಿ ಪತಿ. ಮಂಜುಳಾ ಮಾನಸಿಕ ಅಸ್ವಸ್ಥತೆಯಾಗಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಪತಿ ಮಂಜುನಾಥ್ ರವಿವಾರ ರಾತ್ರಿ ಪತ್ನಿಯನ್ನ ಭುಜದ ಮೇಲೆ ಎತ್ತೊಯ್ದು ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಯಿಂದ ಕೆಳಕ್ಕೆ ದೂಡಿದ್ದಾನೆ. 

ಕೆಳಗೆ ಬಿದ್ದು, ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಆವೇಳೆಗಾಗಲೇ ಆಕೆ ಮೃತಪಟ್ಟಿದ್ದರು

ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ  ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News