ಪೆನ್ ಡ್ರೈವ್ ಪ್ರಕರಣ | ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ...
Update: 2024-04-29 14:30 GMT
ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು,"ಇಂತಹ ಆರೋಪಗಳು ನಮ್ಮ ಕುಟುಂಬಕ್ಕೆ ಹೊಸದಲ್ಲ. ಇದೆಲ್ಲಾ ರಾಜಕೀಯ ಪ್ರೇರಿತ" ಎಂದು ಹೇಳಿದರು.
ಇಂದು ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು," ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆ, ತನಿಖೆ ಮಾಡಲಿ. ಕಾನೂನಿನ ಪ್ರಕಾರ ಏನಿದೆಯೋ ಹಾಗೆ ಆಗಲಿ" ಎಂದ ಅವರು, ತಮ್ಮ ಹಾಗೂ ಪುತ್ರ ಪ್ರಜ್ವಲ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದರು.
ಇದೇ ವೇಳೆ ತಮ್ಮ ಮಗ ಪ್ರಜ್ವಲ್ ನಾಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರಕಾರ ಎಸ್‌ಐಟಿ ರಚನೆ ಮಾಡಿದೆ. ನಾವೆಲ್ಲೂ ಓಡಿ ಹೋಗಿಲ್ಲ. ಆತ ವಿಚಾರಣೆಗೆ ಕರೆದರೆ ಬರುತ್ತಾನೆ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ. ಪ್ರಜ್ವಲ್ ವಿದೇಶಕ್ಕೆ ಹೋಗಬೇಕಿತ್ತು ಹೋಗಿದ್ದಾನೆ. ತನಿಖೆಗೆ ಕರೆದರೆ ಬರುತ್ತಾನೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.