×
Ad

ಪೊಲೀಸ್ ಆಯುಕ್ತ ಬಿ. ದಯಾನಂದ ಅಮಾನತು ಖಂಡಿಸಿ ಪ್ರತಿಭಟನೆ

Update: 2025-06-07 16:45 IST

ವಿಜಯನಗರ: ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅಮಾನತು ಮಾಡಿರುವದನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ನಗರದ ವಾಲ್ಮೀಕಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಪ್ರತಿಭಟನೆ ನಡೆಸಿದ ವಾಲ್ಮೀಕಿ ಸಮುದಾಯದವ್ರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಎಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಎಸಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಕೂಡಲೇ ಐಪಿಎಸ್ ದಕ್ಷ ಅಧಿಕಾರಿ ಬೊ. ದಯಾನಂದ ಅವರ ಅಮಾನತು ಆದೇಶ ರದ್ದು ಪಡಿಸಿ ಅದೇ ಹುದ್ದೆಗೆ ಅವರನ್ನ ಮರುನೇಮಕ ಮಾಡಬೇಕು ಇಲ್ಲದೇ ಹೋದಲ್ಲಿ ವಾಲ್ಮೀಕಿ‌ ಸಮುದಾಯದಿಂದ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು‌ ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News