×
Ad

ಬಂಟ್ವಾಳ : ಚಿನ್ನಾಭರಣ ಕಳವು ಪ್ರಕರಣ; ಆರೋಪಿಯ ಬಂಧನ

Update: 2026-03-10 14:13 IST

ಬಂಟ್ವಾಳ : ಐದು ತಿಂಗಳ ಹಿಂದೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನ ಸಮುದ್ರ ಹೋಟೇಲ್ ಬಳಿ ನಿಲ್ಲಿಸಿದ್ದ ಬಸ್ ನಿಂದ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ .

ಬಂಧಿತ ಆರೋಪಿಯನ್ನು ಮಧ್ಯಪ್ರದೇಶದ ನಿವಾಸಿ ಸಮದ್ ಖಾನ್ (37) ಎಂದು ಗುರುತಿಸಲಾಗಿದೆ.

2025 ರ ನವೆಂಬರ್ 19 ರಂದು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನ ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ದುರ್ಗಾಂಬಾ ಬಸ್ ನಲ್ಲಿ ಬ್ಯಾಗಿನೊಳಗೆ ಇರಿಸಲಾಗಿದ್ದ ಬ್ರಹ್ಮಾವರ ಮೂಲದ ದಂಪತಿಗಳು ರೂಪಾಯಿ 20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿಕೊಂಡು, ಆತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News