×
Ad

ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆ | ಲಕ್ಷ್ಮೀ ಹೆಬ್ಬಾಳ್ಕರ್‌ ನೇತೃತ್ವದ ʼಪುನಶ್ಚೇತನ ಪ್ಯಾನೆಲ್ʼಗೆ ಗೆಲುವು

Update: 2025-09-29 15:19 IST

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೇತೃತ್ವದ ʼಪುನಶ್ಚೇತನ ಪ್ಯಾನೆಲ್ʼ ಭರ್ಜರಿ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಬಾಬಾ ಸಾಹೇಬ್‌ ಪಾಟೀಲ್‌, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್ ನಿಂದ ಸ್ಫರ್ಧಿಸಿದ್ದ ಎಲ್ಲ 15 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ವಿರೋಧಿ ಪ್ಯಾನೆಲ್ ಗಳು ಧೂಳೀಪಟವಾಗಿವೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ರೈತರು ನಮ್ಮ ಮೇಲೆ ವಿಶ್ವಾಸವಿಟ್ಟು ಅಭೂತಪೂರ್ವ ಗೆಲುವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ ಎಲ್ಲ ಕಾರ್ಮಿಕರಿಗೂ ಸಹ ಕೃತಜ್ಞತೆ ಸಲ್ಲಿಸುತ್ತೇವೆ. ಅವರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸುತ್ತೇವೆ ಎಂದರು.

ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದು ಖಚಿತ. ಎಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News