ಐಎಎಸ್ ಆಧಿಕಾರಿ ಮಹಾಂತೇಶ ಬೀಳಗಿ ಸೇರಿ ನಾಲ್ವರ ಅಂತ್ಯಕ್ರಿಯೆ
ಬೆಳಗಾವಿ : ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಾಘತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿ ನಾಲ್ವರ ಅಂತ್ಯಕ್ರಿಯೆ ರಾಮದುರ್ಗ ಹೊರ ವಲಯದ ಅವರ ತೋಟದಲ್ಲಿ ನೆರವೇರಿತು.
ಮಹಾಂತೇಶ ಬೀಳಗಿ ಅವರ ಚಿತೆಗೆ ಅಣ್ಣ ಸಿದ್ದರಾಮಪ್ಪ ಅವರು ಅಗ್ನಿಸ್ಪರ್ಶ ಮಾಡಿದರು. ಕುಟುಂಬಸ್ಥರ ಆಕ್ರಂದನದ ನಡುವೆ ನಾಲ್ಕು ಜನರ ಅಂತ್ಯಸಂಸ್ಕಾರ ಮಾಡಲಾಯಿತು. ಮಹಾಂತೇಶ ಅವರ ಪಕ್ಕದಲ್ಲಿ ಶಂಕರ ಬೀಳಗಿ, ಈರಣ್ಣಾ ಬೀಳಗಿ, ಈರಣ್ಣಾ ಶಿರಸಂಗಿ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು.
ಶಾಸಕ ಅಶೋಕ ಪಟ್ಟಣ, ಜಿಎಸ್ ಪಾಟೀಲ್, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ, ವಾಯ್.ಎಸ್.ಪಾಟೀಲ, ಶಿವಾನಂದ ಕಾಪಶಿ, ವಿಜಯಮಹಾಂತೇಶ, ಸುರೇಶ ಇಟ್ನಾಳ್, ವೈಶಾಲಿ, ರವಿ ಚೆಣ್ಣನ್ನವರ, ಯಶೋಧಾ ವಂಟಗೋಡಿ, ಚನ್ನಬಸವಣ್ಣ ಲಂಗೋಟಿ, ಡಾ.ಭೀಮಾಶಂಕರ ಗುಳೇದ, ಹಣಮಂತರಾಯಪ್ಪ, ರಿಷಂತ್, ಯಶವಂತ ಗುರಿಕಾರ, ಗಂಗಾಧರಸ್ವಾಮಿ, ಗೋವಿಂದರೆಡ್ಡಿ, ಪದ್ಮಾ ಬಸವಂತಪ್ಪ, ಶಶಿಧರ ಕುರೇರ ಸೇರಿದಂತೆ 50ಕ್ಕೂ ಅಧಿಕ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು ಹಾಜರಿದ್ದು, ಅಂತಿಮ ದರ್ಶನ ಪಡೆದರು.