×
Ad

ಉ.ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒಮ್ಮತದಿಂದ ತೀರ್ಮಾನ

Update: 2025-12-08 21:54 IST

ಸ್ಪೀಕರ್ ಯು.ಟಿ.ಖಾದರ್

ಬೆಳಗಾವಿ(ಸುವರ್ಣ ವಿಧಾನಸೌಧ) : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರದಿಂದ (ಡಿ.9) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ.

ಸೋಮವಾರ ಸುವರ್ಣ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‌ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಇನ್ನಿತರ ಹಿರಿಯ ಸಚಿವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News