×
Ad

ಬೆಳಗಾವಿ | ಪ್ರತ್ಯೇಕ ಪ್ರಕರಣ : ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಮೃತ್ಯು

Update: 2025-09-06 19:48 IST

ಬೆಳಗಾವಿ : ಬೆಳಗಾವಿ ನಗರ ಹಾಗೂ ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನಗರದ ಬೃಹತ್‌ ಮೂರ್ತಿಗಳನ್ನು ವಿಸರ್ಜನೆ ಮಾಡಲು ಸಿದ್ಧಪಡಿಸಿದ ಜಕ್ಕೇರಿ ಹೊಂಡದಲ್ಲಿ ಬಿದ್ದ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ್ (33) ಮೃತಪಟ್ಟರು. ಮೂರ್ತಿಯ ಜತೆಗೆ ನೀರಿಗೆ ಬಿದ್ದ ಅವರನ್ನು ಜತೆಯಲ್ಲಿದ್ದವರು ಎತ್ತಿ ಹೊರಕ್ಕೆ ತಂದರು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು ಎಂದು ತಿಳಿಸಲಾಗಿದೆ.

ಇನ್ನೊಂದೆಡೆ, ನಂದಗಡ ಗ್ರಾಮದಲ್ಲಿ ಮೂರ್ತಿ ವಿಸರ್ಜನೆಗೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಯುವಕನ ಹೆಸರು, ಊರು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News