×
Ad

ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಕಾರ್ಯಕಾರಿ

Update: 2024-08-16 21:38 IST

ಬೆಂಗಳೂರು : ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ಬೆಳಗಾವಿಯಲ್ಲಿ ನಾಳೆ (ಆ.17) ನಡೆಯಲಿದೆ ಎಂದು ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಸದಂ ತಿಳಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ, ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿರೆಡ್ಡಿ ಸೇರಿದಂತೆ ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಗರದ ಮಹಂತ ಭವನದಲ್ಲಿ ನಡೆಯುವ ಈ ಸಭೆಯಲ್ಲಿ ಅತಿವೃಷ್ಟಿ ಹಾನಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು, ಪಕ್ಷಗಳ ಹೊಂದಾಣಿಕೆ ರಾಜಕೀಯ, ಮುಂಬರುವ ಜಿ.ಪಂ-ತಾ.ಪಂ, ಬಿಬಿಎಂಪಿ, ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಸೇರಿದಂತೆ ರಾಜ್ಯದ ಅನೇಕ ಜ್ವಲಂತ ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News