×
Ad

Belagavi | ಮತ್ತೊಂದು ಕೃಷ್ಣಮೃಗ ಸಾವು; ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಸಾವಿನ ಸಂಖ್ಯೆ 31ಕ್ಕೆ ಏರಿಕೆ

Update: 2025-11-17 13:41 IST
ಸಾಂದರ್ಭಿಕ ಚಿತ್ರ |Image by wirestock on Freepik

ಬೆಳಗಾವಿ : ಇಲ್ಲಿನ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ನಸುಕಿನಜಾವ ಮೃತಪಟ್ಟಿದ್ದು, ಇತ್ತೀಚಿನ ಕೆಲ ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಮೃಗಾಲಯದಲ್ಲಿ ಸಾವುಗಳ ಸರಣಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿದರು. “ಸೋಂಕು ಇತರ ಪ್ರಾಣಿಗಳಿಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು” ಎಂದು ಅವರು ಸೂಚಿಸಿದರು.

ಈ ನಡುವೆ, ಪರಿಸ್ಥಿತಿಯನ್ನು ಪರಿಶೀಲಿಸಲು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎನ್.ರಂಗಸ್ವಾಮಿ ಮೃಗಾಲಯಕ್ಕೆ ಆಗಮಿಸಿದ್ದು, ಅಧಿಕಾರಿಗಳಿಂದ ಸಾವಿನ ಬಗ್ಗೆ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News