Bagalkote | ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು
Update: 2026-01-15 17:48 IST
ಬಾಗಲಕೋಟೆ : ಸಂಕ್ರಾಂತಿ ಹಿನ್ನೆಲೆ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಾಲಿಕಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.
ಮೃತರನ್ನು ಒಂದೇ ಕುಟುಂಬದ ಮನೋಜ ಬಡಿಗೇರ (17) ಹಾಗೂ ಪ್ರಮೋದ ಬಡಿಗೇರ (17) ಎಂದು ಗುರುತಿಸಲಾಗಿದೆ.
ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.